ಖಾಸಗಿ ಕಾಲೇಜು ವಿದ್ಯಾರ್ಥಿನಿಯರ ಫೋಟೋ ವೈರಲ್ ಪ್ರಕರಣ..! – ಇಬ್ಬರು ವಿದ್ಯಾರ್ಥಿಗಳ ಬಂಧನ

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಆ.12. ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯ ಫೋಟೋ ಗಳನ್ನು ಅಸಭ್ಯವಾಗಿ ಇನ್ಸ್ಟ್ರಾಗ್ರಾಂನಲ್ಲಿ ಫೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಈ ಇಬ್ಬರು ಸೇರಿ ‌ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಅದೇ ಕಾಲೇಜಿನ ದ್ವಿತೀಯ ಬಿಕಾಂ ಓದುತ್ತಿರುವ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.


ಕಳೆದ ಎರಡು ದಿನಗಳ ಹಿಂದೆ ಇದೇ ಕಾಲೇಜಿನ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ಬಂಧಿಸಿದ್ದು, ಪರೀಕ್ಷೆ ಮಾಡಿದಾಗ ಇವರಿಬ್ಬರ ಹೆಸರನ್ನು ಬಾಯಿಬಿಟ್ಟಿದ್ದ. ಪೊಲೀಸರು ಈ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೂವರಲ್ಲಿ ಓರ್ವ ವಿದ್ಯಾರ್ಥಿ ಹ್ಯಾಕರ್ ಆಗಿದ್ದಾನೆ. ಮಾಸ್ಟರ್ ಮೈಂಡ್ ವಿದ್ಯಾರ್ಥಿಯ ಕೈಚಳಕದಿಂದಲೇ ಹುಡುಗಿಯರ ಅಕೌಂಟ್ ಹ್ಯಾಕ್ ಮಾಡಿ ಫೋಟೋಗಳನ್ನು ಅಸಭ್ಯವಾಗಿ ಎಡಿಟ್ ಮಾಡಿ ಇನ್ ಸ್ಟಾಗ್ರಾಂನಲ್ಲಿ ಹರಿ ಬಿಡುತ್ತಿದ್ದರು. ಪ್ರಕರಣದ ದಿಕ್ಕು ತಪ್ಪಿಸಲು ಈ ಬಂಧಿತ ವಿದ್ಯಾರ್ಥಿಗಳು ಫೇಕ್ ಅಕೌಂಟ್ ಕ್ರಿಯೇಟ್ ಮಾಡಿದ್ದರು. ಎಡಿಟ್ ಮಾಡಿದ ಫೋಟೋಗಳ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುತ್ತಿದ್ದರು.‌ ವಿದ್ಯಾರ್ಥಿಗಳು ಪೊಲೀಸರ ಹಾದಿ ತಪ್ಪಿಸಲು ಬೇರೆ ಬೇರೆ ತಂತ್ರಗಳನ್ನು ರೂಪಿಸುತ್ತಿದ್ದರು ಎಂಬುದು ತಿಳಿದು ಬಂದಿದೆ.

error: Content is protected !!
Scroll to Top