ಪಯಸ್ವಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ.‌ 14. ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಅರಂಬೂರು ಪಾಲಡ್ಕ ಬಳಿ ಪಯಸ್ವಿನಿ ನದಿಯಲ್ಲಿ ಪತ್ತೆಯಾದ ಕುರಿತು ವರದಿಯಾಗಿದೆ.

ಸ್ಥಳೀಯ ಯುವಕರು ಮೀನು ಹಿಡಿಯಲು ಹೋಗಿದ್ದ ಸಂದರ್ಭ ನದಿಯಲ್ಲಿ ಮೃತದೇಹ ಕಂಡು ಬಂದಿದ್ದು, ತಕ್ಷಣವೇ ಅವರು ಸುಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಮಾಹಿತಿ ತಿಳಿದ ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿರುವುದಾಗಿ ತಿಳಿದು ಬಂದಿದೆ.

Scroll to Top