ಗಾಂಜಾ ಸೇವನೆ- ಆರೋಪಿಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 15. ಗಾಂಜಾ ಸೇವಿಸಿ ಸಾರ್ವಜನಿಕವಾಗಿ ತಿರುಗಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ವರದಿಯಾಗಿದೆ.


ಬಂಧಿತರನ್ನು ಸಜಿಪ ಮುನ್ನೂರು ಗ್ರಾಮದ ನಂದಾವರ ಕೋಟೆ ನಿವಾಸಿ ಮಹಮ್ಮದ್ ಶಾಕಿಬ್ ಹಾಗೂ ಬಿ.ಮೂಡ ಗ್ರಾಮದ ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆರೀಫ್ ಎಂದು ಗುರುತಿಸಲಾಗಿದೆ. ಆರೋಪಿಗಳಿಬ್ಬರು ಬಂಟ್ವಾಳ ತಾಲೂಕಿನ ನಂದಾವರ ಎಂಬಲ್ಲಿ ಶಾಲಾ ಬಳಿ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂಬ ಸ್ಥಳೀಯರು ನೀಡಿದ ದೂರಿನಂತೆ ಸ್ಥಳಕ್ಕೆ ಬೇಟಿ ನೀಡಿದ ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಸ್ ಐ ಪೋಲೀಸರ ತಂಡ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ, ಬಳಿಕ ವೈದ್ಯರ ಬಳಿ ಪರೀಕ್ಷಿಸಿದಾಗ ಗಾಂಜಾ ಸೇವನೆ ದೃಢವಾಗಿದೆ ಎನ್ನಲಾಗಿದೆ. ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

 

Scroll to Top