ಮಂಗಳೂರು: ಅಪ್ರಾಪ್ತ ಬಾಲಕಿಯ ಅಪಹರಣ ಪ್ರಕರಣ – ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಪಣಂಬೂರು, ಆ.15. ಅಪ್ರಾಪ್ತ ಬಾಲಕಿ ಅಪಹರಣ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಪಣಂಬೂರು ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಾಲಕಿ ಸಹಿತ ಆರೋಪಿಯನ್ನು ಬಂಧಿಸಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬಂಧಿತನನ್ನು ಮುಹಮ್ಮದ್‌ ಸರ್ಫರಾಝ್‌ ಯಾನೆ ಚಪ್ಪು (22) ಎಂದು ಗುರುತಿಸಲಾಗಿದೆ. ಆರೋಪಿಯು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಅಪಹರಣ ಮಾಡಿರುವುದಾಗಿ ಬಾಲಕಿಯ ಪೋಷಕರು ಪಣಂಬೂರು ಪೊಲೀಸರಿಗೆ ದೂರು ನೀಡಿದ್ದರು. ದೂರು ದಾಖಲಾಗುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ಅಪಹರಣಕ್ಕೊಳಗಾಗಿದ್ದ ಬಾಲಕಿ ಸಹಿತ ಆರೋಪಿ ಮುಹಮ್ಮದ್‌ ಸರ್ಫರಾಝ್‌ ನನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

Also Read  ಕಡ್ಯ-ಕೊಣಾಜೆ ➤ ರಮೇಶ್ ಆಚಾರಿ ಅವರಿಗೆ ಸಮ್ಮಾನ

error: Content is protected !!
Scroll to Top