ಮಗನ ಸಾವಿನ ಬೆನ್ನಲ್ಲೇ ತಂದೆ ಆತ್ಮಹತ್ಯೆ..!



(ನ್ಯೂಸ್ ಕಡಬ) newskadaba.com ಉಳ್ಳಾಲ, ಆ. 16. ಪುತ್ರ ಆತ್ಮಹತ್ಯೆ ಮಾಡಿಕೊಂಡ ಒಂದು ತಿಂಗಳ ಅಂತರದಲ್ಲೇ ತಂದೆಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲದಿಂದ ವರದಿಯಾಗಿದೆ.








ಆತ್ಮಹತ್ಯೆ ಮಾಡಿಕೊಂಡವರನ್ನು ಕೇರಳ ಕುಂಬಳೆ ಬಳಿಯ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಲೋಕೇಶ್ (52) ಎಂದು ಗುರುತಿಸಲಾಗಿದೆ. ಇವರ ಮೃತದೇಹವು ಉಳ್ಳಾಲ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ. ಇವರ ಪುತ್ರ ರಾಜೇಶ್ ಕಳೆದ ಜು. 10 ರಂದು ನಾಪತ್ತೆಯಾಗಿ, ಬಳಿಕ ಆತನ ಮೃತದೇಹ ಜು. 12 ರಂದು ಬೆಳಗ್ಗೆ ಮಂಗಳೂರು ಬೆಂಗರೆ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿತ್ತು. ಮಗನ ಸಾವಿನ ಬಳಿಕ ಲೋಕೇಶ್ ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎನ್ನಲಾಗಿದೆ.






error: Content is protected !!
Scroll to Top