ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಲ್ಪೆ, ಆ. 18. ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಮೀನುಗಾರರೋರ್ವರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.


ನಾಪತ್ತೆಯಾದ ಮೀನುಗಾರನನ್ನು ಗೋಪಾಲ ಶನಿಯಾರ್‌ ನಾಯ್ಕ (35) ಎಂದು ಗುರುತಿಸಲಾಗಿದೆ. ಇವರು ಆ. 11ರಂದು ಇತರ ಮೀನುಗಾರರೊಂದಿಗೆ ಮಲ್ಪೆ ಬಂದರಿನಿಂದ ಬೋಟಿನಲ್ಲಿ ತೆರಳಿದ್ದು, ಆ. 13ರಂದು ಮಧ್ಯಾಹ್ನದ ವೇಳೆ ಮೀನುಗಾರಿಕೆ ನಡೆಸುತ್ತಿರುವಾಗ ಆಕಸ್ಮಿಕವಾಗಿ ಬೋಟಿನಿಂದ ಕಾಲು ಜಾರಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದರು.

ತಕ್ಷಣವೇ ಬೋಟಿನಲ್ಲಿದ್ದವರು ಹುಡುಕಾಟ ನಡೆಸಿದರೂ ಅವರು ಪತ್ತೆಯಾಗಿರಲಿಲ್ಲ. ಈ ಕುರಿತು ಮಲ್ಪೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Also Read  9 ಮಂದಿ ಬಾಂಗ್ಲಾದೇಶಿಗರನ್ನು ವಶಕ್ಕೆ ಪಡೆದ ಮಲ್ಪೆ ಪೊಲೀಸರು

error: Content is protected !!
Scroll to Top