ಎಳನೀರು ಕಳ್ಳತನ – ವಾಹನದ ನಂಬರ್ ಪ್ಲೇಟ್ ಗೆ ಮಸಿ ಬಳಿದು ಕೃತ್ಯವೆಸಗಿದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 18. ರಾತ್ರೋರಾತ್ರಿ ಟಾಟಾ ಏಸ್ ವಾಹನದಲ್ಲಿ ಬಂದ ಖದೀಮರು ರಸ್ತೆ ಬದಿಯಲ್ಲಿಟ್ಟಿದ್ದ ಬರೋಬ್ಬರಿ 1,500 ಎಳನೀರನ್ನು ಕದ್ದೊಯ್ದಿರುವ ಘಟನೆ ಜಯನಗರ ರಾಷ್ಟ್ರೀಯ ವಿದ್ಯಾಲಯ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ.


ಕಳ್ಳರು ಕೃತ್ಯಕ್ಕೆ ಬಳಸಿದ್ದ ವಾಹನದ ನಂಬರ್ ಪ್ಲೇಟ್‌ಗೆ ಮಸಿ ಬಳಿದಿದ್ದರು ಎನ್ನಲಾಗಿದೆ. ಈ ಬಗ್ಗೆ ಜಯನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

Scroll to Top