ಗಾಯಾಳುವನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ – ಚಾಲಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ.18. ಚಾಲಕನ ನಿಯಂತ್ರಣ ತಪ್ಪಿದ ಆಂಬ್ಯುಲೆನ್ಸ್ ವಾಹನವೊಂದು ಹೆದ್ದಾರಿಯಲ್ಲಿ ಉರುಳಿಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರದಂದು ಬಂಟ್ವಾಳದಲ್ಲಿ ನಡೆದಿದೆ.

ಮೃತ ಚಾಲಕನನ್ನು ಶಬೀರ್ ಎಂದು ಗುರುತಿಸಲಾಗಿದೆ. ಮಡಂತ್ಯಾರ್ ನಿಂದ ಮಂಗಳೂರು ಕಡೆಗೆ ರೋಗಿಯನ್ನು ಸಾಗಿಸುತ್ತಿದ್ದ ವೇಳೆ ಬಂಟ್ವಾಳ ಸಮೀಪದ ವೊಗ್ಗ ಎಂಬಲ್ಲಿ ನಿಯಂತ್ರಣ ತಪ್ಪಿ ತೂಫಾನ್ ಆಂಬ್ಯುಲೆನ್ಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ವಾಹನದಲ್ಲಿದ್ದವರು ಗಾಯಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Scroll to Top