ನೆಕ್ಕಿಲಾಡಿ: ಅಕ್ರಮ ಮದ್ಯ ಮಾರಾಟ ► ಹೊಟೇಲ್ ಮಾಲಕ ಬಂಧನ



(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ.06. ಯಾವುದೇ ಪರವಾನಗಿ ಇಲ್ಲದೆ ಅಕ್ರಮ ಮದ್ಯ ಮಾರಾಟವನ್ನು ಪತ್ತೆಹಚ್ಚಿರುವ ಬಂಟ್ವಾಳ ಪೊಲೀಸರು ವಿವಿಧ ಕಂಪೆನಿಗಳ ಮದ್ಯವನ್ನು ವಶಪಡಿಸಿಕೊಂಡು ಓರ್ವನನ್ನು ಬಂಧಿಸಿದ ಘಟನೆ ಕಡೇಶ್ವಾಲ್ಯದಲ್ಲಿ ಸೋಮವಾರದಂದು ನಡೆದಿದೆ.







ಕಡೆಶ್ವಾಲ್ಯದ ನೆಕ್ಕಿಲಾಡಿಯ ಹೊಟೆಲ್ ನಲ್ಲಿ ಅಕ್ರಮವಾಗಿ ಯಾವುದೇ ಪರವಾನಗೆ ಇಲ್ಲದೆ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪಿಎಸ್ಐ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ 4,720 ರೂ ಬೆಲೆಯ ವಿವಿಧ ಕಂಪನಿಗಳ 11.880 ಲೀಟರ್ ಮದ್ಯದೊಂದಿಗೆ 4020 ರೂ. ಹಣವನ್ನು ಮತ್ತು ಮದ್ಯ ಮಾರಾಟ ಮಾಡುತ್ತಿದ್ದ ಹೋಟೆಲ್ ಮಾಲೀಕ ನಾಗೇಂದ್ರ(47) ಎಂಬಾತನನ್ನು ಬಂಧಿಸಿ ಅಬಕಾರಿ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.






error: Content is protected !!
Scroll to Top