ರಸ್ತೆ ಅಪಘಾತ- ಪಂಜ ಕೆನರಾ ಬ್ಯಾಂಕ್ ಮಾಜಿ ಉದ್ಯೋಗಿ ಮೃತ್ಯು

(ನ್ಯೂಸ್ ಕಡಬ) newskadaba.com ವಿರಾಜಪೇಟೆ, ಆ. 19. ದ್ವಿಚಕೃ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬ್ಯಾಂಕ್ ಉದ್ಯೋಗಿಯೋರ್ವರು ಮೃತಪಟ್ಟ ಘಟನೆ ವಿರಾಜಪೇಟೆ ಅಮ್ಮತ್ತಿ ರಸ್ತೆಯ ಸುಂಕದಕಟ್ಟೆ ಬಳಿ ನಡೆದಿದೆ.

ಮೃತರನ್ನು ಮೂಲತಃ ಕೇರಳ ರಾಜ್ಯದ ತ್ರಿಶೂರ್ ಜಿಲ್ಲೆಯ ಪ್ರಸ್ತುತ ಅಮ್ಮತ್ತಿಯ ಕೆನರಾ ಬ್ಯಾಂಕ್ ಉದ್ಯೋಗಿ ಅಮೃತ(24) ಎಂದು ಗುರುತಿಸಲಾಗಿದೆ. ಇವರು ಈ ಹಿಂದೆ ಕಡಬ ತಾಲೂಕಿನ ಪಂಜ ಕೆನರಾ ಬ್ಯಾಂಕ್ ನಲ್ಲಿ ಕಾರ್ಯ ನಿರ್ವಹಿಸಿದ್ದರು. ಅಮೃತ ಅವರು ಎಂದಿನಂತೆ ಕೆಲಸಕ್ಕೆ ಹೋಗುತ್ತಿದ್ದ ವೇಳೆ ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸವಾರರಿಗೂ ತಲೆಗೆ ಗಂಭೀರ ಗಾಯಗಳಾಗಿತ್ತು. ಅವರನ್ನು ತಕ್ಷಣವೇ ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಅಮೃತ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಮೃತರವರು ಕೊನೆಯುಸಿರೆಳೆದಿದ್ದಾರೆ. ಮತ್ತೋರ್ವ ಬೈಕ್ ಸವಾರ ಬಿಳುಗುಂದ ಗ್ರಾಮದ ವಿಠ್ಠಲ ಎಂಬವರನ್ನು ಮಂಗಳೂರಿನ ಆಸ್ಪತ್ರೆಗೆ ಕಳುಹಿಸಿ ಕೊಡಲಾಗಿದೆ. ಈ ಕುರಿತು ವಿರಾಜಪೇಟೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಬಸ್ ಸೌಲಭ್ಯಕ್ಕೆ ಒತ್ತಾಯಿಸಿ-ಹುಬ್ಬಳ್ಳಿ-ವಿಜಯಪುರ ಗ್ರಾಮಸ್ಥರಿಂದ ಪ್ರತಿಭಟನೆ ➤ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು 

error: Content is protected !!
Scroll to Top