ಗುತ್ತಿಗೆ ಆಧಾರದಲ್ಲಿ ಕೆಎಸ್ಸಾರ್ಟಿಸಿ ಚಾಲಕರ ನೇರ ನೇಮಕಾತಿ – ದ.ಕ, ಉಡುಪಿ ಜಿಲ್ಲೆಯವರಿಗೆ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ರಾಜ್ಯ ಸರಕಾರದ ಸಾರಿಗೆ ನಿಗಮದ ಬಸ್ ಗಳಲ್ಲಿ ಗುತ್ತಿಗೆ ಆಧಾರದಲ್ಲಿ ಚಾಲಕರನ್ನು ನೇಮಕಗೊಳಿಸುವ ಪ್ರಕ್ರಿಯೆಗೆ ಅರ್ಜಿ ಆಹ್ವಾನಿಸಲಾಗಿದ್ದು, ನೇರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ದ.ಕ. ಹಾಗೂ ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಆಗಸ್ಟ್ ತಿಂಗಳ 22ರ ಮಂಗಳವಾರದಂದು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಇಂದಿರಾಗಾಂಧಿ ಜನ್ಮಶತಾಬ್ದಿ ಭವನದ ಕೆಳ ಅಂತಸ್ಥಿನಲ್ಲಿ ಸಂದರ್ಶನಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ಬೆಳಗ್ಗೆ 10 ಗಂಟೆಯಿಂದ 1ಗಂಟೆಯ ತನಕ ಅವಕಾಶ ಕಲ್ಪಿಸಲಾಗಿದೆ.

ಸಲ್ಲಿಸಬೇಕಾದ ದಾಖಲೆಗಳು: ಆಧಾರ್ ಕಾರ್ಡ್, ವಾಹನ ಚಾಲನಾ ಪರವಾಣಿಗೆ ಪತ್ರ, ಭಾರೀ ಗಾತ್ರದ ವಾಹನ ಚಾಲನೆ ಅನುಜ್ಞಾ ಪತ್ರ, 4 ಪಾಸ್ ಪೋರ್ಟ್ ಫೋಟೊ ಮತ್ತು 7ನೇ ತರಗತಿ ಮೇಲ್ಪಟ್ಟ ತೇರ್ಗಡೆಯಾದ ಅಂಕಪಟ್ಟಿ.

Scroll to Top