(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 21. ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳಂಜ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಕ್ರಿಸ್ಟಾ ಅರೇಂಜರ್ ನ ಆಲ್ವಿನ್ ಪಿಂಟೋ ಅವರ ಪತ್ನಿ ಸಿಂಥಿಯಾ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ವೇಣೂರು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.