ಹಾಸ್ಟೆಲ್ ನಿಂದ ನಾಪತ್ತೆಯಾಗಿದ್ದ ಬಾಲಕರಿಬ್ಬರು ಪುತ್ತೂರಿನಲ್ಲಿ ಪತ್ತೆ



(ನ್ಯೂಸ್ ಕಡಬ) newskadaba.com ವಿಟ್ಲ, ಆ. 22. ಪರಿಶಿಷ್ಟ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಪುತ್ತೂರಿನಲ್ಲಿ ಪತ್ತೆಯಾಗಿರುವ ಕುರಿತು ವರದಿಯಾಗಿದೆ.







ಎಂದಿನಂತೆ ಶಾಲೆಗೆ ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಸಂಜೆ ವಾಪಾಸ್ಸು ಬಂದಿರಲಿಲ್ಲ. ಈ ಬಗ್ಗೆ ಉಳಿದ ವಿದ್ಯಾರ್ಥಿಗಳಲ್ಲಿ ವಿಚಾರಿಸಿದಾಗ ಶಾಲೆಗೆ ಹೋಗದೇ ಇರುವ ವಿಚಾರ ತಿಳಿದುಬಂದಿದೆ. ಬಾಲಕರ ಮನೆಯಲ್ಲೂ ವಿಚಾರಿಸಿ, ವಿದ್ಯಾರ್ಥಿ ನಿಲಯದ ಸುತ್ತಮುತ್ತಲಿನ ಪರಿಸರದಲ್ಲಿ ಹುಡುಕಾಡಿದರೂ ಪತ್ತೆಯಾಗದ ಹಿನ್ನೆಲೆ ಹಾಸ್ಟೆಲ್ ಮೇಲ್ವಿಚಾರಕಿ ವಿಟ್ಲ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಇಬ್ಬರು ವಿದ್ಯಾರ್ಥಿಗಳು ಪುತ್ತೂರಿನಲ್ಲಿ ಪತ್ತೆಯಾದ ಬಗ್ಗೆ ವರದಿಯಾಗಿದೆ.






error: Content is protected !!
Scroll to Top