ಸುಬ್ರಹ್ಮಣ್ಯ ದೇಗುಲಕ್ಕೆ 7ಲಕ್ಷ ರೂ. ಮೌಲ್ಯದ ಪುಂಗನೂರು ಹಸುಗಳ ಹಸ್ತಾಂತರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 22. ನಾಗರ ಪಂಚಮಿ ದಿನದಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕ್ಷೇತ್ರದ ಭಕ್ತ ಮತ್ತು ಹೈದರಾಬಾದ್‌ನ ಎಎಂಆರ್‌ ಗ್ರೂಪ್‌ನ ಆಡಳಿತ ನಿರ್ದೇಶಕ ಎ.ಮಹೇಶ್‌ ರೆಡ್ಡಿ ಅವರು ಸುಮಾರು 7 ಲಕ್ಷ ರೂ. ಮೌಲ್ಯದ ಪುಂಗನೂರು ತಳಿಯ 4 ಗೋವುಗಳನ್ನು ದಾನವಾಗಿ ನೀಡಿದರು.


3 ಬಿಳಿಬಣ್ಣದ ಹಸುಗಳು ಹಾಗೂ 1 ಕರುವನ್ನು ದೇವಸ್ಥಾನದ ನಾಗಪ್ರತಿಷ್ಠಾ ಮಂಟಪದ ಬಳಿಗೆ ಕರೆತಂದು ವಿಶೇಷ ಅಲಂಕಾರ ಮಾಡಿ ಪೂಜೆ ನೆರವೇರಿಸಿ ವೈದಿಕ ವಿಧಿ ವಿಧಾನಗಳೊಂದಿಗೆ ದೇಗುಲಕ್ಕೆ ಹಸ್ತಾಂತರಿಸಲಾಯಿತು

ಮಹೇಶ್‌ ರೆಡ್ಡಿ ಅವರು ಈ ಹಿಂದೆ 27 ಲಕ್ಷ ರೂ. ವೆಚ್ಚದಲ್ಲಿ ಭೋಜನ ಪ್ರಸಾದ ತಯಾರಿ ಮತ್ತು ಲಡ್ಡು ತಯಾರಿಮಾ ಯಂತ್ರೋಪಕರಣಗಳನ್ನು ಹಾಗೂ ಷಣ್ಮುಖ ಪ್ರಸಾದ ಭೋಜನ ಶಾಲೆಗೆ ಭೋಜನ ಪ್ರಸಾದ ವಿತರಣೆಗೆ ಗಾಡಿಗಳನ್ನು ಕಾಣಿಕೆ ರೂಪದಲ್ಲಿ ಅರ್ಪಿಸಿದ್ದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನರಾಂ ಎಸ್‌.ಸುಳ್ಳಿ, ಕಾರ್ಯ ನಿರ್ವಹಣಾಧಿಕಾರಿ ಡಾ|ನಿಂಗಯ್ಯ, ವ್ಯವಸ್ಥಾಪನ ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ, ಶ್ರೀವತ್ಸ ಬೆಂಗಳೂರು, ಪಿಜಿಎಸ್‌ಎನ್‌ ಪ್ರಸಾದ್‌, ಮನೋಹರ ರೈ, ಲೋಕೇಶ್‌ ಮುಂಡುಕಜೆ, ವನಜಾ ವಿ.ಭಟ್‌, ಶೋಭಾ ಗಿರಿಧರ್‌, ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್‌ ಮೊದಲಾದವರಿದ್ದರು.

Also Read  ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ► ಲಕ್ಷಾಂತರ ರೂ. ಮೌಲ್ಯದ ಸ್ವತ್ತುಗಳೊಂದಿಗೆ ಮೂವರ ಬಂಧನ

error: Content is protected !!
Scroll to Top