ಡಿ.ಎಡ್, ಬಿ.ಎಡ್ ನ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 22. ಡಿ.ಎಡ್ ಹಾಗೂ ಬಿ.ಎಡ್  ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) 25,000 ರೂ.ಗಳ ಪ್ರೋತ್ಸಾಹಧನ ಅರ್ಜಿ ಆಹ್ವಾನಿಸಲಾಗಿದೆ.

ಸೇವಾ ಸಿಂಧು  ಆನ್‍ಲೈನ್ ಪೋರ್ಟಲ್ https://sevasindhuservices.karnataka.gov.in/ ನ  ಮೂಲಕ ಸೆ. 21 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಚೇರಿ, ಮೌಲಾನಾ ಆಜಾದ್ ಭವನ, ಒಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ ಇಲ್ಲಿ ಸಂಪರ್ಕಿಸಬಹುದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Scroll to Top