ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸಹಾಯಧನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 22. ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಜಿಮ್ ಸ್ಥಾಪನೆಯ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹರು 2023ರ ಸೆ. 04 ರೊಳಗೆ ಅರ್ಜಿ ಭರ್ತಿ ಮಾಡಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ಮಂಗಳೂರು ಕಚೇರಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 0824-2451264 ಅನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಪುತ್ತೂರು: ಅರುಣ್‌ ಪುತ್ತಿಲ ವಿರುದ್ಧ  ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ನಿರ್ಬಂಧ ಹೊರಡಿಸಿದ ಕೋರ್ಟ್

error: Content is protected !!
Scroll to Top