ಕಡಬ: ಕಾಡು ಪ್ರಾಣಿಗಳ ಬೇಟೆ – ಮೂವರ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಆ.22. ಕಾಡು ಪ್ರಾಣಿಗಳ ಬೇಟೆಯಾಡಿ ಕಾರಿನಲ್ಲಿ ತೆರಳುತ್ತಿದ್ದ ಮೂವರು ಕಡಬ ಪೋಲಿಸರ ಬಲೆಗೆ ಬಿದ್ದ ಘಟನೆ ಠಾಣಾ ವ್ಯಾಪ್ತಿಯ ಕುಂತೂರು ಬಳಿ ಮಂಗಳವಾರ ಬೆಳಗಿನ ಜಾವ ನಡೆದಿದೆ.

ಬಂಧಿತ ಆರೋಪಿಗಳನ್ನು ನೆಲ್ಯಾಡಿ ನಿವಾಸಿಗಳಾದ ಬಿನು, ದಿನೇಶ್ ಹಾಗೂ ನವೀನ್ ಎಂದು ಗುರುತಿಸಲಾಗಿದೆ. ಆರೋಪಿಗಳು ಬಲ್ಯ ರಕ್ಷಿತಾರಣ್ಯದಲ್ಲಿ ಕಾಡು ಪ್ರಾಣಿಗಳನ್ನು ಬೇಟೆಯಾಡಿ ಇನ್ನೋವಾ ಕಾರಿನಲ್ಲಿ ಬೆಳಗಿನ ಜಾವ ಮನೆಯ ಕಡೆ ತೆರಳುತ್ತಿದ್ದ ವೇಳೆ ಗಸ್ತು ತಿರುಗುತ್ತಿದ್ದ ಕಡಬ ಪೋಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ವಾಹನ ನಿಲ್ಲಿಸಿ ತಪಾಸಣೆ ನಡೆಸಿದಾಗ ಬೇಟೆಯಾಡಿದ ಪ್ರಾಣಿಗಳು ಕಂಡು ಬಂದಿದ್ದು, ಮೂವರನ್ನು ಬಂಧಿಸಿ ಬೇಟೆಯಾಡಿದ ಪ್ರಾಣಿಗಳನ್ನು ವಶಕ್ಕೆ ಪಡೆದಿದ್ದಾರೆ.

Also Read  ಸೆ.15 ರಂದು ಹೆಜಮಾಡಿ ಟೋಲ್ ಗೇಟಿನಿಂದ ಸಂಪಾಜೆವರೆಗೆ ಬೃಹತ್ ಮಾನವ ಸರಪಳಿ- 1ಲಕ್ಷಕ್ಕೂ ಅಧಿಕ ಜನ ಭಾಗಿ

error: Content is protected !!
Scroll to Top