ಮೂಡುಬಿದಿರೆ: ಬೈಕ್ – ಬಸ್ ಢಿಕ್ಕಿ ► ಬೈಕ್ ಸವಾರ ಸ್ಥಳದಲ್ಲೇ ಮೃತ್ಯು



(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಫೆ.06. ಬಸ್ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರದಂದು ಮೂಡಬಿದಿರೆಯಲ್ಲಿ ನಡೆದಿದೆ.







ಮೃತ ಸವಾರನನ್ನು ಮೂಡುಬಿದಿರೆಯ ಹಂಡೇಲು ನಿವಾಸಿ ಯಾಸೀರ್ ಎಂದು ಗುರುತಿಸಲಾಗಿದೆ. ಈತ ತನ್ನ ಬೈಕಿನಲ್ಲಿ ತೆರಳುತ್ತಿದ್ದಾಗ ಹಂಡೇಲು ಸಮೀಪ ಖಾಸಗಿ ಬಸ್ ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆನ್ನಲಾಗಿದೆ. ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.






error: Content is protected !!
Scroll to Top