ಲೋನ್ ಆ್ಯಪ್ ಮೂಲಕ ಸಾಲ ಪಡೆಯುವಂತೆ ಕಿರಿಕ್ – ನಗ್ನ ಚಿತ್ರ ವೈರಲ್ ಮಾಡೋದಾಗಿ ಬ್ಲಾಕ್ ಮೇಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 25. ಲೋನ್ ಆ್ಯಪ್ ಮೂಲಕ ಸಾಲ ಪಡೆದ ಯುವತಿಯಿಂದ ಹೆಚ್ಚಿನ ಹಣಕ್ಕೆ ಬೇಡಿಕೆಯಿಟ್ಟು, ನಗ್ನ ಚಿತ್ರ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿರುವ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಯುವತಿರೋರ್ವಳು ಗೂಗಲ್ ಪ್ಲೇ ಸ್ಟೋರ್‌ನ ‘ಕ್ವಿಕ್ ಮನಿ’ ಎಂಬ ಲೋನ್ ಆ್ಯಪ್ ಮೂಲಕ 10,000 ರೂ. ಸಾಲಕ್ಕೆ ಅರ್ಜಿ ಹಾಕಿದ್ದಳು. ತಕ್ಷಣ ಆಕೆಯ ಖಾತೆಗೆ 7,500 ರೂ. ಜಮೆಯಾಗಿತ್ತು. ಕೆಲವು ದಿನಗಳ ಬಳಿಕ ಸಾಲ ಮರುಪಾವತಿ ಮಾಡಿದ್ದಳು. ಬಳಿಕ ಹಲವು ವಾಟ್ಸಾಪ್ ಸಂಖ್ಯೆಗಳಿಂದ ಕರೆ ಮಾಡಿದ ಅಪರಿಚಿತರು ಪುನಃ ಸಾಲ ಪಡೆಯಬೇಕು ಎಂದು ಒತ್ತಾಯಿಸಿ ಆಕೆಯ ಖಾತೆಗೆ 14,000 ರೂ. ಜಮೆ ಮಾಡಿದ್ದರು. ಅದನ್ನು ಕೂಡ ತಾನು ಮರುಪಾವತಿ ಮಾಡಿದ್ದಳು.

Also Read  ಕುಕ್ಕೆ ಸುಬ್ರಹ್ಮಣ್ಯ : ಗೋ ಕಳ್ಳತನ ನಡೆಸುವವರ ವಿರುದ್ಧ ಕ್ರಮ ಕೈ ಗೊಳ್ಳಲು ಮನವಿ

ಇದಾದ ನಂತರವೂ ಕರೆ ಮಾಡಿದ ಅಪರಿಚಿತರು ಹೆಚ್ಚಿನ ಹಣ ಪಾವತಿ ಮಾಡುವಂತೆ ಒತ್ತಾಯಿಸಿದರಲ್ಲದೇ ಆಕೆಯ ಖಾತೆಯಲ್ಲಿದ್ದ 51,000 ರೂ.ಗಳನ್ನು ವರ್ಗಾಯಿಸಿಕೊಂಡರಲ್ಲದೇ ಮತ್ತಷ್ಟು ಹಣ ನೀಡುವಂತೆಯೂ ಒತ್ತಾಯಿಸಿದ್ದರು. ಒಂದು ವೇಳೆ ಹಣ ನೀಡದಿದ್ದಲ್ಲಿ ಆಕೆಯ ಫೋಟೊವನ್ನು ಹುಡುಗನ ಜೊತೆ ನಗ್ನವಾಗಿ ಇರುವಂತೆ ಎಡಿಟ್ ಮಾಡಿ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾರೆ ಎಂದು ಯುವತಿ ಪೊಲೀಸರಿಗೆ ನೀಡಿದ ದೂರಿನಂತೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top