(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಅಡ್ಯಾರ್ ಎಂಬಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಅಡ್ಯಾರ್ ಪದವು ನಿವಾಸಿ ಶರಫುದ್ದೀನ್ (16) ಎಂದು ಗುರುತಿಸಲಾಗಿದೆ. ಹತ್ತನೇ ತರಗತಿ ವಿದ್ಯಾರ್ಥಿಯಾಗಿರುವ ಈತ ಗೆಳೆಯನೊಂದಿಗೆ ಆಕ್ಟಿವಾದಲ್ಲಿ ಸಂಚರಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಢಿಕ್ಕಿಯ ರಭಸಕ್ಕೆ ಹಿಂಬದಿ ಸವಾರನಾಗಿದ್ದ ಶರಫುದ್ದೀನ್ ರಸ್ತೆಗೆಸೆಯಲ್ಪಟ್ಟು ತೀವ್ರ ರಕ್ತ ಸ್ರಾವವಾಗಿದ್ದು, ಇನ್ನೋರ್ವನಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.










