ಇಸ್ರೋ ವಿಜ್ಞಾನಿಯ ಕಾರನ್ನು ಹಿಂಬಾಲಿಸಿ ಕಲ್ಲೆಸೆತ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ಇಸ್ರೋದ ವಿಜ್ಞಾನಿಯೊಬ್ಬರ ಕಾರನ್ನು ಹಿಂಬಾಲಿಸಿ ಕಲ್ಲೆಸೆದ ಘಟನೆ ಬೆಂಗಳೂರಿನ ರತನಹಳ್ಳಿ ಮುಖ್ಯ ರಸ್ತೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಆಗಸ್ಟ್‌ 24ರ ರಾತ್ರಿ ಮನೆಗೆ ತೆರಳುತ್ತಿದ್ದಾಗ ಗೂಂಡಾಗಳು ವಿಜ್ಞಾನಿ ಅಶುತೋಷ್ ಸಿಂಗ್ ಅವರ ಕಾರನ್ನು ಹಿಂಬಾಲಿಸಿ ಕಾರನ್ನು ತಡೆದು ನಿಲ್ಲಿಸಿ ಹಿಂಭಾಗದ ಗಾಜನ್ನು ಒಡೆದು ಹಾಕಿದ್ದಾರೆ. ಈ ಕುರಿತು ದೂರು ನೀಡಲು ಮುಂದಾದಾಗ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಎಕ್ಸ್‌ ಮೂಲಕ ಘಟನೆ ಹಂಚಿಕೊಂಡ ಬಳಿಕ ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

Scroll to Top