ಪಿಒಪಿ ವಿಗ್ರಹ ತಯಾರಿಸಿದರೆ ಕ್ರಿಮಿನಲ್ ಕೇಸ್ – ಸಚಿವ ಈಶ್ವರ್ ಖಂಡ್ರೆ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 13. ಪಿಓಪಿ ವಿಗ್ರಹಗಳು ಜಲ ಮೂಲಗಳಿಗೆ ಅಪಾಯಕಾರಿಯಾಗಿದ್ದು, ಇಂತಹ ಮೂರ್ತಿಗಳ ತಯಾರಿಕೆ, ಸಾಗಾಟ, ಮಾರಾಟ ಮತ್ತು ವಿಸರ್ಜನೆಯನ್ನು ಮಾಡಿದರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ.

ನೀರಿನಲ್ಲಿ ಕರಗದ ಪಿಓಪಿ ವಿಗ್ರಹಗಳನ್ನು ಸಂಪೂರ್ಣ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಗಣೇಶ ಚತುರ್ಥಿಯ ಹಿನ್ನೆಲೆಯಲ್ಲಿ ಪರಿಸರ ಸ್ನೇಹಿ ಗಣಪತಿ ಹಬ್ಬದ ಆಚರಣೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ತಮ್ಮ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಇಂತಹ ತಯಾರಕರಿಗೆ ಮಂಡಳಿ ನೋಟಿಸ್ ನೀಡಿದ್ದಾಗ್ಯೂ ಅವರು ಮತ್ತೆ ತಯಾರಿಕೆಯಲ್ಲಿ ತೊಡಗಿದ್ದರೆ ನಿರ್ದಾಕ್ಷಿಣ್ಯ ಕ್ರಿಮಿನಲ್ ಕೇಸ್ ಹಾಕಿ ಕ್ರಮ ಜರುಗಿಸಲು ಸೂಚನೆ ನೀಡಿದರು.

error: Content is protected !!

Join the Group

Join WhatsApp Group