ಪ.ಜಾ, ಪ.ಪಂ. ಅಭ್ಯರ್ಥಿಗಳಿಂದ ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ. 16. ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಮಾರ್ಗಸೂಚಿಯಂತೆ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಸಕ್ತ ಅರ್ಹ ಅಭ್ಯರ್ಥಿಗಳು ಸಿಸ್ಕೋ ಸರ್ಟಿಫೈಡ್ ನೆಟ್ವರ್ಕ್ ಅಸೋಸಿಯೇಟ್ (ಸಿ,ಸಿ,ಎನ್,ಎ) ಸಿಸ್ಕೋ ಐ.ಟಿ. ಎಸೆನ್ಸಿಯಲ್ಸ್, ಬೇಸಿಕ್ ವೆಲ್ಡಿಂಗ್, ಟಗ್ ವೆಲ್ಡಿಂಗ್, ಮಿಗ್ ವೆಲ್ಡಿಂಗ್, ರೆಫ್ರಿಜಿರೇಶನ್ ಮತ್ತು ಏರ್ ಕಂಡೀಷನಿಂಗ್, ಟ್ಯಾಲಿ ಈಆರ್‍ಪಿ/ ಪ್ರೈಮ್ ಕೋರ್ಸುಗಳಲ್ಲಿ ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ನಗರದ ಕದ್ರಿಹಿಲ್ಸ್‍ನಲ್ಲಿರುವ, ಸರ್ಕಾರಿ ಮಹಿಳಾ ಐಟಿಐ ನ ಎರಡನೇ ಮಹಡಿಯಲ್ಲಿರುವ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ(ಕೆ.ಜಿ.ಟಿ.ಟಿ.ಐ) ಕಚೇರಿಯಿಂದ ಅರ್ಜಿ ಪಡೆದು ಭರ್ತಿ ಮಾಡಿ ತರಬೇತಿಗೆ ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ:0824-2211477 ಹಾಗೂ 8277741731 ಅನ್ನು ಸಂಪರ್ಕಿಸಬಹುದು ಎಂದು  ಕೆ.ಜಿ.ಟಿ.ಟಿ.ಐ ನ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group