ಕಾರು- ಬೈಕ್ ನಡುವೆ ಢಿಕ್ಕಿ; ಸಹಸವಾರೆ ಮೃತ್ಯು

(ನ್ಯೂಸ್ ಕಡಬ) newskadaba.com ಮುಲ್ಕಿ, ಸೆ. 16. ಕಾರು ಹಾಗೂ ಬೈಕ್ ನಡುವೆ  ಢಿಕ್ಕಿ ಸಂಭವಿಸಿದ ಪರಿಣಾಮ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರೆ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ನಡೆದಿದೆ.

ಮೃತರನ್ನು ಕೇರಳ ರಾಜ್ಯದ ಕಾಸರಗೋಡಿನ ನಿವಾಸಿ ಪ್ರೀತಿಕಾ ಶೆಟ್ಟಿ(21) ಎಂದು ಗುರುತಿಸಲಾಗಿದ್ದು. ಗಾಯಾಳು ಬೈಕ್ ಸವಾರ ಬಂಟ್ವಾಳದ ಅರಂತೋಡಿ ಬಾಳೆಪುಣಿ ನಿವಾಸಿ ಮನ್ವಿತ್ ರಾಜ್ ಶೆಟ್ಟಿ(21) ಎಂದು ತಿಳಿದುಬಂದಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಬೈಕ್ ಗೆ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ಕಿನ್ನಿಗೋಳಿ ಕಡೆಯಿಂದ ಮುಲ್ಕಿ ಕಡೆಗೆ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಬೈಕ್ ನ್ನು ದೂಡಿಕೊಂಡು ಹೋಗಿದ್ದು ಬೈಕ್ ಹಿಂಭಾಗದಲ್ಲಿ ಕುಳಿತುಕೊಂಡಿದ್ದ ಸಹಸವಾರೆ ಪ್ರೀತಿಕಾ ಶೆಟ್ಟಿ ತಲೆಗೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ಸಾಗಿಸುವಾಗಲೇ ಮೃತಪಟ್ಟಿದ್ದಾರೆ. ಈ ಕುರಿತು ಸುರತ್ಕಲ್ ಉತ್ತರ ಟ್ರಾಫಿಕ್ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Also Read  ಅಮೆರಿಕದ ರಾಜಧಾನಿ ಸುತ್ತಮುತ್ತ ಪ್ರವಾಹ ಪರಿಸ್ಥಿತಿ ನಿರ್ಮಾಣ ➤ ಭಾರೀ ಮಳೆಯಿಂದಾಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತ

error: Content is protected !!
Scroll to Top