ಧರ್ಮಸ್ಥಳದಲ್ಲಿ 48 ಟನ್ ಅಕ್ರಮ ಮರಳು ದಾಸ್ತಾನು ಪತ್ತೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 16. ತಾಲೂಕಿನ ಬಂದಾರು ಎಂಬಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಧರ್ಮಸ್ಥಳ ಫೊಲೀಸರು ಈ ಕುರಿತು ಪ್ರಕರಣ
ದಾಖಲಿಸಿಕೊಂಡಿದ್ದಾರೆ.

ಬಂದಾರು ಗ್ರಾಮ ಪಂಚಾಯತ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ನೀಡಿರುವ ಮಾಹಿತಿಯಂತೆ ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿರುವ ಬಗ್ಗೆ ಸಂದೇಶ್ ಗೌಡ ಎಂಬವರ ವಿರುದ್ದ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಇದೀಗ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ ಸುಮಾರು 48 ಟನ್ ನಷ್ಟು ಮರಳು ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Scroll to Top