ಬಾಲಕಿಯ ಅತ್ಯಾಚಾರ ಆರೋಪ- ವೃದ್ಧನ ಬಂಧನ

(ನ್ಯೂಸ್ ಕಡಬ) newskadaba.com ಸಕಲೇಶಪುರ, ಸೆ. 17. ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ವೃದ್ಧನೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ.

ಬಂಧಿತ ಆರೋಪಿಯನ್ನು ಮೀಸೆ ಮಂಜಯ್ಯ (73) ಎಂದು ಗುರುತಿಸಲಾಗಿದೆ. ಈತನನ್ನು ಸಕಲೇಶಪುರ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಗಳಿಗಾದ ಅನ್ಯಾಯದಿಂದ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯ ತಾಯಿಯು ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group