ಸಾಲಮನ್ನಾ ಇಂದು ಫ್ಯಾಶನ್ ಆಗಿದೆ: ವೆಂಕಯ್ಯ ನಾಯ್ಡು ಲೇವಡಿ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜೂ.22. ಸಾಲ ಮನ್ನಾ ಎಂಬುದು ಇಂದಿನ ದಿನಗಳಲ್ಲಿ ಫ್ಯಾಶನ್ ಆಗಿದ್ದು, ತೀವ್ರ ಸಂಕಷ್ಟದ ಸ್ಥಿತಿಯಲ್ಲಿ ಮಾತ್ರ ಸಾಲಮನ್ನಾ ಮಾಡಬೇಕು. ಆದರೆ ಇದು ಸಮಸ್ಯೆಗಳಿಗೆ ಅಂತಿಮ ಪರಿಹಾರವಲ್ಲ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಲೇವಡಿ ಮಾಡಿದ್ದಾರೆ.

ಕರ್ನಾಟಕ ಸರಕಾರವು ಬುಧವಾರದಂದು ಸಹಕಾರಿ ಬ್ಯಾಂಕ್ ಗಳಲ್ಲಿನ 50 ಸಾವಿರ ರೂ.ವರೆಗಿನ ರೈತರ ಸಾಲವನ್ನು ಮನ್ನಾ ಮಾಡಿ ಆದೇಶ ಹೊರಡಿಸಿತ್ತು. ಪ್ರತಿಯೊಬ್ಬ ರೈತನ 50 ಸಾವಿರ ರೂ. ಸಾಲಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದು, ಇದರಿಂದ ಸುಮಾರು 8,165 ಕೋಟಿ ರೂ. ರಾಜ್ಯ ಸರಕಾರಕ್ಕೆ ಹೊರೆಯಾಗಲಿದೆ ಎಂದಿದ್ದರು. ಇದನ್ನು ಲೇವಡಿ ಮಾಡಿರುವ ನಾಯ್ಡು, ಸಾಲ‌ ಮನ್ನಾ ಎಂಬುವುದು ಇಂದಿನ ದಿನಗಳಲ್ಲಿ ಫ್ಯಾಷನ್ ಆಗಿದೆ. ಸೋಮವಾರ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ರೈತರ ಸಾಲಮನ್ನಾ ಘೋಷಿಸಿದ್ದರು. ಇದರಿಂದಾಗಿ ಸುಮಾರು 10.25 ಲಕ್ಷ ರೈತರು ಪ್ರಯೋಜನ ಪಡೆಯಲಿದ್ದಾರೆ. ಈ ಹಿಂದೆ ತಮಿಳುನಾಡು ಮತ್ತು ಮಹಾರಾಷ್ಟ್ರ ಸರಕಾರಗಳು ಸಾಲ ಮನ್ನಾ ಮಾಡಿತ್ತು ಎಂದವರು ಹೇಳಿದರು.

ಈ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

error: Content is protected !!

Join the Group

Join WhatsApp Group