ಮುಖ್ಯಶಿಕ್ಷಕನಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 17. ಶಾಲೆಯ ಮುಖ್ಯ ಶಿಕ್ಷಕನೋರ್ವ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದಲ್ಲಿ ನಡೆದಿದೆ.

ಬಂಧಿತನನ್ನು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶಿವರಾಂ ಎಂದು ಗುರುತಿಸಲಾಗಿದೆ.  ಈತ ಶಾಲೆಯಲ್ಲಿ ವಿದ್ಯಾರ್ಥಿನಿಯರ ಜತೆ ಅಸಭ್ಯವಾಗಿ ವರ್ತಿಸುತ್ತಾ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದ್ದು, ಈ ಬಗ್ಗೆ ವಿದ್ಯಾರ್ಥಿನಿಯರು ಪೋಷಕರ ಬಳಿ ಹೇಳಿಕೊಂಡಿದ್ದರು. ವಿಷಯ ತಿಳಿದ ಪೋಷಕರು ಸಂಘಟನೆಗಳ ಸಹಕಾರದೊಂದಿಗೆ ಮದ್ದೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ಮುಖ್ಯಶಿಕ್ಷಕ ಶಿವರಾಂನನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

Scroll to Top