ಉಪ್ಪಿನಂಗಡಿ: ಗಾಂಜಾ ಸೇವನೆ- ಓರ್ವ ಅರೆಸ್ಟ್..!

(ನ್ಯೂಸ್ ಕಡಬ) newsmadaba.com ಉಪ್ಪಿನಂಗಡಿ, ಸೆ. 17. ಮಾದಕ ದ್ರವ್ಯ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ಯುವಕನೋರ್ವನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ 34ನೇ ನೆಕ್ಕಿಲಾಡಿಯ ಬಸ್‌ ತಂಗುದಾಣದ ಬಳಿ ನಡೆದಿದೆ.

ಬಂಧಿತನನ್ನು ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ನಿವಾಸಿ ವೆಂಕಟೇಶ್‌ (32) ಎಂದು ಗುರುತಿಸಲಾಗಿದೆ. ಈತನ ಅನುಚಿತ ವರ್ತನೆಯ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಿಚಾರಿಸಿದಾಗ ಗಾಂಜಾ ಸೇವಿಸಿರುವುದನ್ನು ಆರೋಪಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

Also Read  ಆಧಾರ್-ಪ್ಯಾನ್ ಲಿಂಕ್: ಮಾರ್ಚ್ ಗೆ ಅಂತಿಮ ಗಡುವು ವಿಸ್ತರಣೆ

error: Content is protected !!
Scroll to Top