ಭೀಕರ ರಸ್ತೆ ಅಪಘಾತ – ಡಿವೈಡರ್ ಗೆ ಕಾರು ಢಿಕ್ಕಿಯಾಗಿ ಮೂವರ ದುರ್ಮರಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18. ಗಣೇಶ ಹಬ್ಬದ ದಿನವೇ ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯ ನಾಲ್ಕರಲ್ಲಿ ನಡೆದಿದೆ.

ಸ್ವಿಫ್ಟ್ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರ ಪೈಕಿ ಮೂವರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಇಬ್ಬರು ಗಂಭೀರ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Scroll to Top