ಮಂಗಳೂರು: ಸೆ. 20ರಂದು ವಿದ್ಯಾರ್ಥಿ ನಿಲಯಗಳ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಸಮಾಜ ಕಲ್ಯಾಣ ಇಲಾಖೆ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಉದ್ಘಾಟನಾ ಸಮಾರಂಭವನ್ನು ಸೆ. 20ರ ಬುಧವಾರದಂದು ನಗರದ ಕೊಡಿಯಾಲ್ ಬೈಲ್‍ ನ ಟಿವಿಎಸ್ ಸರ್ಕಲ್ ಸಮೀಪವಿರುವ ಸಮಾಜ ಕಲ್ಯಾಣ ಇಲಾಖೆ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದಲ್ಲಿ ಹಮ್ಮಿಕೊಳ್ಳಲಾಗಿದೆ.


ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತಿ ವಹಿಸುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ ಅವರು ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಕುದ್ಮಲ್ ರಂಗ ರಾವ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸುವರು. ಶಾಸಕರಾದ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸಂಸದರಾದ ವೀರೇಂದ್ರ ಹೆಗ್ಗಡೆ, ಶಾಸಕರಾದ ಡಾ. ಭರತ್ ಶೆಟ್ಟಿ ವೈ, ಹರೀಶ್ ಪೂಂಜ, ರಾಜೇಶ್ ನಾಯ್ಕ್ ಯು, ಭಾಗೀರಥಿ ಮುರುಳ್ಯ, ಅಶೋಕ್ ಕುಮಾರ್ ರೈ, ಉಮಾನಾಥ ಎ. ಕೋಟ್ಯಾನ್, ವಿಧಾನ ಪರಿಷತ್ ಶಾಸಕರಾದ ಕೋಟ ಶ್ರೀನಿವಾಸ ಪೂಜಾರಿ, ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಎಸ್.ಎಲ್. ಭೋಜೇಗೌಡ, ಪ್ರತಾಪ ಸಿಂಹ ನಾಯಕ್, ಕೆ. ಮಂಜುನಾಥ ಭಂಡಾರಿ, ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಅವರು ಭಾಗವಹಿಸುವರು. ವಿಶೇಷ ಆಹ್ವಾನಿತರಾಗಿ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ. ರಾಕೇಶ್ ಕುಮಾರ್ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

Also Read  ಗಂಡಿಬಾಗಿಲು ಮಸೀದಿಯಲ್ಲಿ ಗಣರಾಜ್ಯೋತ್ಸವ

error: Content is protected !!
Scroll to Top