ದರ್ಶನ್ ಬೆನ್ನಲ್ಲೇ ಕಾವೇರಿ ಪರ ಧ್ವನಿ ಎತ್ತಿದ ನಟ ಸುದೀಪ್

(ನ್ಯೂಸ್ ಕಡಬ) newskadaba.com. ಬೆಂಗಳೂರು, ಸೆ. 21. ಕರ್ನಾಟಕದ ಜೀವನದಿ ಕಾವೇರಿಯನ್ನು ತಮಿಳುನಾಡಿಗೆ ಹರಿಸುತ್ತಿರುವ ಸರ್ಕಾರದ ನಡೆಯ ವಿರುದ್ಧ ರೈತರು ಹಾಗೂ ಕನ್ನಡಪರ ಸಂಘಟನೆಗಳಿಂದ ತೀವ್ರ ಪ್ರತಿಭಟನೆ ನಡೆಯುತ್ತಿದ್ದರೂ, ಕನ್ನಡ ಸಿನಿಮಾ ನಟರು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸದ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆಗಳು ನಟರ ವಿರುದ್ಧ ಧಿಕ್ಕಾರ ಕೂಗಿ, ಕರ್ನಾಟಕ ಚಲನಚಿತ್ರ ಮಂಡಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ್ದವು.


ಇದರ ಬೆನ್ನಲ್ಲೇ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ತೂಗುದೀಪ ಕಾವೇರಿ ಹೋರಾಟಕ್ಕೆ ಬೆಂಬಲಿಸಿದ್ದರು. ಅದರಂತೆ ಇದೀಗ ಕರುನಾಡ ಚಕ್ರವರ್ತಿ ಸುದೀಪ್‌ ಕೂಡಾ ಕಾವೇರಿ ಹೋರಾಟಕ್ಕೆ ಧುಮುಕಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ (ಹಳೆಯ ಟ್ವಿಟರ್)ನಲ್ಲಿ ಪೋಸ್ಟ್‌ ಮಾಡಿರುವ ಅವರು, “ನಮ್ಮ ಕಾವೇರಿ ನಮ್ಮ ಹಕ್ಕು. ಅಷ್ಟು ಒಮ್ಮತದಿಂದ ಗೆಲ್ಲಿಸಿರುವ ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ ಎಂದು ನಾನು ನಂಬಿದ್ದೇನೆ . ಈ ಕೂಡಲೇ ತಜ್ಞರು ಕಾರ್ಯತಂತ್ರ ರೂಪಿಸಿ ನ್ಯಾಯ ನೀಡಲಿ ಎಂದು ಒತ್ತಾಯಿಸುತ್ತೇನೆ. ನೆಲ-ಜಲ, ಭಾಷೆಯ ಹೋರಾಟದಲ್ಲಿ ನನ್ನ ಧ್ವನಿಯೂ ಇದೆ. ಕಾವೇರಿ ತಾಯಿ ಕರುನಾಡನ್ನು ಕಾಪಾಡಲಿ” ಎಂದು ಪೋಸ್ಟ್‌ ಮಾಡಿಕೊಂಡಿದ್ದಾರೆ.

Also Read  ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಹಿನ್ನೆಲೆ ➤ ಕೆ.ಎಸ್.ಆರ್.ಟಿ.ಸಿಯಿಂದ ಉಚಿತ ಬಸ್ ಸೌಲಭ್ಯ

error: Content is protected !!
Scroll to Top