ಸೆ. 25 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ತಾಲೂಕು ಪಂಚಾಯತ್, ನಗರಸಭೆ, ಪಟ್ಟಣ ಪಂಚಾಯತ್, ಪುರಸಭೆ ಹಾಗೂ ಗ್ರಾಮ ಪಂಚಾಯತ್‍ಗಳ ಸಹಯೋಗದೊಂದಿಗೆ 2023-24ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಇದೇ ಸೆ. 25 ರಂದು ನಗರದ ಮಂಗಳ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.


ತಾಲೂಕು ಮಟ್ಟದಲ್ಲಿ ಸಂಘಟಿಸಲಾಗುವ ಕ್ರೀಡೆಗಳ ವಿವರ
ಪುರುಷರಿಗೆ:- ಅಥ್ಲೆಟಿಕ್ಸ್- 100 ಮೀ, 200 ಮೀ, 400 ಮೀ, 800 ಮೀ, 1500 ಮೀ, 5000 ಮೀ. ಓಟ, 10000 ಮೀ. ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವಲಿನ್ ಥ್ರೋ, ಡಿಸ್ಕಸ್ ಥ್ರೋ, 110 ಮೀ ಹರ್ಡಲ್ಸ್, 4*100 ಮೀ ರಿಲೇ, 4*400 ಮೀ ರಿಲೇ, ವಾಲಿಬಾಲ್, ಫುಟ್‍ಬಾಲ್, ಖೋ-ಖೋ, ಕಬಡ್ಡಿ, ಥ್ರೋಬಾಲ್ ಮತ್ತು ಯೋಗ.

Also Read  ನೀತಿ ತಂಡದ ಕಡಬ ಸಮಿತಿ ಅಧ್ಯಕ್ಷರಾಗಿ ರಂಜಿತ್ ಎಂ.ಎ. ಆಯ್ಕೆ ► ಕಾರ್ಯದರ್ಶಿಯಾಗಿ ನವೀನ್ ಗೋಖಲೆ

ಮಹಿಳೆಯರಿಗೆ:- ಅಥ್ಲೆಟಿಕ್ಸ್- 100 ಮೀ, 200 ಮೀ, 400 ಮೀ, 1500 ಮೀ, 3000 ಮೀ. ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವಲಿನ್ ಥ್ರೋ, ಡಿಸ್ಕಸ್ ಥ್ರೋ, 100 ಮೀ ಹರ್ಡಲ್ಸ್, 4*100 ಮೀ ರಿಲೇ, 4*400 ಮೀ ರಿಲೇ, ವಾಲಿಬಾಲ್, ಫುಟ್‍ಬಾಲ್, ಖೋ-ಖೋ, ಕಬಡ್ಡಿ, ಥ್ರೋಬಾಲ್ ಮತ್ತು ಯೋಗ

ಷರತ್ತುಗಳು:- ರಕ್ಷಣಾ ಪಡೆ, ಅರೆ ರಕ್ಷಣಾ ಪಡೆಗೆ ಸೇರಿದ ಕ್ರೀಡಾಪಟುಗಳಿಗೆ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ, ಕರ್ನಾಟಕ ರಾಜ್ಯದಲ್ಲಿ ವಾಸಿಸುವ ಕ್ರೀಡಾಪಟುಗಳು ಮಾತ್ರ ಸ್ಪರ್ಧಿಸಲು ಅರ್ಹರಿರುತ್ತಾರೆ, ಒಬ್ಬ ಕ್ರೀಡಾಪಟು ಅಥವಾ ತಂಡ ಯಾವುದೇ ಜಿಲ್ಲೆಯಲ್ಲಿ ಒಂದು ತಾಲೂಕಿನಲ್ಲಿ ಭಾಗವಹಿಸಿದ ನಂತರ ಬೇರೆ ತಾಲೂಕಿನಿಂದ ಭಾಗವಹಿಸಲು ಅವಕಾಶವಿರುವುದಿಲ್ಲ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ನೆಲ್ಯಾಡಿ ಮೂರ್ತೆದಾರರ ಸಹಕಾರಿ ಸಂಘ ➤ ಪಿಗ್ಮಿ ಸಂಗ್ರಾಹಕ ನಾಪತ್ತೆ

error: Content is protected !!
Scroll to Top