ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪ್ರಶ್ನೆಪತ್ರಿಕೆ ಲೀಕ್ – ಮಂಗಳೂರು ಸಿಬ್ಬಂದಿಯಿಂದ ಕೃತ್ಯ ಶಂಕೆ..?

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಪರೀಕ್ಷೆಗೆ ಒಂದು ದಿನ ಮೊದಲೇ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‌ಒಯು) ಪ್ರಶ್ನೆ ಪತ್ರಿಕೆ ಮಾರಾಟವಾಗಿದ್ದು ಕೆಎಸ್‌ಓಯು ಮಂಗಳೂರು ಕೇಂದ್ರದ ಸಿಬ್ಬಂದಿ ಪ್ರಶ್ನೆ ಪತ್ರಿಕೆ ಮಾರಾಟ ಮಾಡಿರುವುದಾಗಿ ಶಂಕಿಸಲಾಗಿದೆ.

ಮಾರಾಟ ಮಾಡಲಾಗುತ್ತಿದೆಯೇ ಎಂಬ ಅನುಮಾನದಿಂದ ವಿದ್ಯಾರ್ಥಿಯೋರ್ವ ಪರಿಶೀಲನೆ ಮಾಡಲು ಹಣ ನೀಡಿ ಪ್ರಶ್ನೆ ಪತ್ರಿಕೆ ತೆಗೆದುಕೊಂಡಿದ್ದು ಆದರೆ ಬಳಿಕ ಪರೀಕ್ಷೆಗೆ ನೀಡಿದ ಪ್ರಶ್ನೆಪತ್ರಿಕೆ ಮತ್ತು ಮಾರಾಟದಿಂದ ಪಡೆದ ಪ್ರಶ್ನೆಪತ್ರಿಕೆಯು ಒಂದೇ ಆಗಿತ್ತು. ಈ ಹಿನ್ನಲೆ ಚಂದು.ಎಚ್.ಎಸ್. ಎಂಬ ವಿದ್ಯಾರ್ಥಿ ಜಯಲಕ್ಷ್ಮಿಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಶ್ನೆ ಪತ್ರಿಕೆಯನ್ನು ವಾಟ್ಸಾಪ್ ಮೂಲಕ ಮಾರಾಟ ಮಾಡಲಾಗಿದ್ದು ಕಂಪ್ಯೂಟರ್ ಇನ್ ಬಿಸಿನೆಸ್ ವಿಷಯದ ಪರೀಕ್ಷೆ ಪ್ರಶ್ನೆ ಪತ್ರಿಕೆ 2000 ರೂಪಾಯಿಗೆ ಮಾರಾಟ ಮಾಡಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಇನ್ನೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎನ್ನಲಾಗಿದೆ.

Also Read  K S R T C ಗೆ ಕೋವಿಡ್ ಸಂಕಷ್ಟ ➤ಆದ್ರೂ ಸದ್ಯಕ್ಕಿಲ್ಲ ಟಿಕೆಟ್ ದರ ಏರಿಕೆ

error: Content is protected !!
Scroll to Top