ಉಗ್ರರ ಜೊತೆ ನಂಟು ಆರೋಪ – ಜಮ್ಮು ಕಾಶ್ಮೀರದ ಪೊಲೀಸ್ ಅಧಿಕಾರಿ ಅರೆಸ್ಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 22. ಭ್ರಷ್ಟಾಚಾರ ಮತ್ತು ಉಗ್ರರ ಜೊತೆಗೆ ನಂಟು ಹೊಂದಿರುವ ಆರೋಪಕ್ಕೆ ಸಂಬಂಧಿಸಿ ಜಮ್ಮು ಮತ್ತು ಕಾಶ್ಮೀರದ ಉನ್ನತ ಪೊಲೀಸ್ ಅಧಿಕಾರಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಬಂಧಿತ ಅಧಿಕಾರಿಯನ್ನು ಜಮ್ಮು ಕಾಶ್ಮೀರದ ಪೊಲೀಸ್ ಉಪ ಅಧೀಕ್ಷಕರಾಗಿರುವ ಶೇಖ್ ಆದಿಲ್ ಮುಷ್ತಾಕ್ ಎಂದು ಗುರುತಿಸಲಾಗಿದೆ. ಈ ಕುರಿತು ಉನ್ನತ ಅಧಿಕಾರಿಗಳು ನೀಡಿದ ಮಾಹಿತಿಯ ಪ್ರಕಾರ, ಭ್ರಷ್ಟಾಚಾರ ಮತ್ತು ಉಗ್ರರ ಜೊತೆಗೆ ನಂಟು ಹೊಂದಿರುವ ಆರೋಪದ ಮೇಲೆ ಶೇಖ್ ಆದಿಲ್ ಮುಷ್ತಾಕ್ ಅವರನ್ನು ಬಂಧಿಸಲಾಗಿದ್ದು, ಭಯೋತ್ಪಾದಕರಿಗೆ ಸಹಾಯ ಮಾಡಿದ ಮತ್ತು ಸಹ ಪೊಲೀಸ್ ಅಧಿಕಾರಿಯನ್ನು ಬಲೆಗೆ ಬೀಳಿಸಲು ಯತ್ನಿಸಿದ ಆರೋಪ ಅವರ ಕೂಡ ಇವರ ಮೇಲಿದೆ ಎಂದೆನ್ನಲಾಗಿದೆ.

error: Content is protected !!

Join the Group

Join WhatsApp Group