ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಿಸದೇ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 22. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟ ಘಟನೆ ಸೋಣಂದೂರಿನಲ್ಲಿ ನಡೆದಿದೆ.

 

ಮೃತ ಯುವಕನನ್ನು ಸೋಣಂದೂರು ಮುಂಡಾಡಿ ನಿವಾಸಿ ಪ್ರಶಾಂತ್‌ ಎಂದು ಗುರುತಿಸಲಾಗಿದೆ. ಈತ ಸೆ.18ರಂದು ರಾತ್ರಿ ವೇಳೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಕೂಡಲೇ ಮನೆಯವರು ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರು. ಆದರೆ ಇದೀಗ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಘಟನೆಯ ಬಗ್ಗೆ ಮೃತನ ಸಂಬಂಧಿ ಪ್ರತೀಕ್‌ ನೀಡಿರುವ ದೂರಿನಂತೆ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Scroll to Top