ಕೊನೆಗೂ ಅಧಿಕೃತವಾಗಿ ಎನ್.ಡಿಎ ಮೈತ್ರಿಕೂಟ ಸೇರಿದ ಜೆಡಿಎಸ್..!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 22.  ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿ ಕೂಟಕ್ಕೆ ಜೆಡಿಎಸ್‌ ಸೇರ್ಪಡೆಯಾಗಿರುವುದು ನನಗೆ ಖುಷಿ ತಂದಿದೆ. ಜೆಡಿಎಸ್‌ ಬೆಂಬಲದಿಂದ ಎನ್‌ಡಿಎ ಮೈತ್ರಿಕೂಟದ ಶಕ್ತಿ ಮತ್ತಷ್ಟು ವೃದ್ದಿಸಿದೆಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ತಿಳಿಸಿದ್ದಾರೆ.

ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಭೇಟಿ ಮಾಡಿದ ಬಳಿಕ ಟ್ವೀಟ್‌ ಮಾಡಿರುವ ನಡ್ಡಾ,  ಜೆಡಿಎಸ್ ಎನ್ ಡಿಎ ಮೈತ್ರಿಕೂಟದ ಭಾಗವಾಗಲು ನಿರ್ಧರಿಸಿರುವುದು ನನಗೆ ಖುಷಿ ತಂದಿದೆ. ನಾವು ಅವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.  ಪ್ರಧಾನಿ ನರೇಂದ್ರ ಮೋದಿ ಅವರ ನವ ಭಾರತದ ಕನಸನ್ನು ಸಾಕಾರಗೊಳಿಸುವಲ್ಲಿ ಮತ್ತಷ್ಟು ಶಕ್ತಿ ತುಂಬಲಿದೆ ಎಂದರು.

Also Read  ಗ್ರಹಣಕ್ಕೆ ಮೊದಲು ಊರು ಬಿಡದಿದ್ದಲ್ಲಿ ಸಾವು ಸಂಭವಿಸಲಿದೆಯೆಂದ ಜ್ಯೋತಿಷಿ ► ಜ್ಯೋತಿಷಿಯ ಮಾತಿಗೆ ಹೆದರಿ ಗ್ರಾಮ ತೊರೆದ 60 ಕುಟುಂಬಗಳು

error: Content is protected !!
Scroll to Top