ಬೈಕ್ ಗೆ ಲಾರಿ ಢಿಕ್ಕಿ- ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 24. ಬೈಕಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಪಾಣೆಮಂಗಳೂರು ನೂತನ ಸೇತುವೆಯಲ್ಲಿ ನಡೆದಿದೆ.

ಮೃತರನ್ನು ಸಜಿಪ ಬೇಂಕ್ಯ ನಿವಾಸಿ ವಾಸುದೇವ ಮಯ್ಯ ಎಂಬವರ ಪುತ್ರ ರಾಜ್ ಕುಮಾರ್ ಎಂದು ಗುರುತಿಸಲಾಗಿದೆ. ವಾಮದಪದವು ಎಂಬಲ್ಲಿ ಕೃಷಿ ಮಾಡಿಕೊಂಡಿದ್ದ ಅವರು, ಇಂದು ಬೆಳಗ್ಗೆ ವಾಮದಪದವಿನಿಂದ ಸಜಿಪದಲ್ಲಿರುವ ತನ್ನ ಮೂಲ ಮನೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಪಾಣೆಮಂಗಳೂರು ಸೇತುವೆ ಬಳಿ ತಲುಪಿದಾಗ ಎದುರಿನಿಂದ ಬಂದ ಜಲ್ಲಿಕಲ್ಲು ಸಾಗಾಟದ ಲಾರಿ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆನ್ನಲಾಗಿದೆ. ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡಿದ್ದ ರಾಜ್ ಕುಮಾರ್ ರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Scroll to Top