ಮರದಿಂದ ಬಿದ್ದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಇರ್ದೆ, ಸೆ. 24. ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಇರ್ದೆ ಗ್ರಾಮದ ಪದರಂಜ ಎಂಬಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ರಾಮಣ್ಣ ಪೂಜಾರಿ ಎಂದು ಗುರುತಿಸಲಾಗಿದೆ. ರಾಮಣ್ಣ ಪೂಜಾರಿಯವರು ಸೆ. 23ರಂದು ಮನೆ ಬಳಿಯ ತೆಂಗಿನ ಮರ ಹತ್ತುವ ಸಂದರ್ಭ ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

Scroll to Top