ಬೆಂಗಳೂರು ಬಂದ್- ಕನ್ನಡ ಚಿತ್ರೋದ್ಯಮ ಬೆಂಬಲ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 26. ಬೆಂಗಳೂರು ಬಂದ್​ಗೆ ಕನ್ನಡ ಚಿತ್ರೋದ್ಯಮವು ಸಂಪೂರ್ಣ ಬೆಂಬಲ ಸೂಚಿಸಿದ ಹಿನ್ನೆಲೆ ಸಿನಿಮಾ ಶೂಟಿಂಗ್ ಬಂದ್​​ ಆಗಿದ್ದು, ಅಲ್ಲದೇ ಚಿತ್ರ ಮಂದಿರಗಳಲ್ಲಿಯೂ ಚಿತ್ರ ಪ್ರದರ್ಶನ ಸ್ಥಗಿತ ಮಾಡಲಾಗಿದೆ.


ಬಂದ್ ಗೆ ಬೆಂಬಲ ನೀಡಿರುವ ಹಿನ್ನೆಲೆ ನಗರದ ಚಿತ್ರಮಂದಿರಗಳಲ್ಲಿ ಇವತ್ತು ಸಿನಿಮಾ ಪ್ರದರ್ಶನವಿಲ್ಲ. ಬೆಂಗಳೂರಿನಲ್ಲಿ ನಡೆಯುತ್ತಿದ್ದ ಚಿತ್ರೀಕರಣವನ್ನು ನಿಲ್ಲಿಸಲಾಗಿದೆ. ಟೆಲಿವಿಷನ್ ಅಸೋಸಿಯೇಷನ್ ಕೂಡ ಬೆಂಬಲ ನೀಡಿದ ಹಿನ್ನೆಲೆ ಸೀರಿಯಲ್ ಹಾಗೂ ರಿಯಾಲಿಟಿ ಶೋ ಚಿತ್ರೀಕರಣಗಳು ಇವತ್ತಿನ ಮಟ್ಟಿಗೆ ನಿಲ್ಲಿಸಲಾಗಿದೆ.

error: Content is protected !!

Join the Group

Join WhatsApp Group