ಕೆಎಸ್ಸಾರ್ಟಿಸಿ ಬಸ್ ಹಾಗೂ ಪಿಕಪ್ ನಡುವೆ ಢಿಕ್ಕಿ – ಪಿಕಪ್ ಚಾಲಕ ಮೃತ್ಯು



(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 26. ರಸ್ತೆ ಬದಿ ನಿಲ್ಲಿಸಿದ್ದ ಪಿಕಪ್ ಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಪಿಕಪ್‌ ಚಾಲಕ ಮೃತಪಟ್ಟ ಘಟನೆ ಕೇರಳ ಕರ್ನಾಟಕ ಗಡಿ ಪ್ರದೇಶವಾದ ಅಡ್ಕಸ್ಥಳದ ಸಮೀಪ ಮಂಗಳವಾರ ನಡೆದಿದೆ.







ಮೃತ ಚಾಲಕನನ್ನು ಪೆರ್ಲ ಮಣಿಯಂಪಾರೆ ಪಜ್ಜನದ ಮುಸ್ತಫ (43) ಎಂದು ಗುರುತಿಸಲಾಗಿದೆ. ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲೆತ್ನಿಸಿದ ಬಸ್ ರಸ್ತೆ ಬದಿ ನಿಲ್ಲಿಸಿದ್ದ ಅಡಿಕೆ ಗಿಡ ಸಾಗಾಟದ ಪಿಕಪ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಪಿಕಪ್ ಚಾಲಕ ಮುಸ್ತಫಾ ಎಂಬವರ ತಲೆಗೆ ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ದರೂ ಅಷ್ಟರಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪಿಕಪ್ ನಲ್ಲಿದ್ದ ಇನ್ನೋರ್ವ ಗಾಯಗೊಂಡಿದ್ದು, ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.






error: Content is protected !!
Scroll to Top