(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 26. ಕಾರು ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಸಹಿತ ಮೂವರು ಗಾಯಗೊಂಡ ಘಟನೆ ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಗ್ರಾಮದ ಸೇಡಿಯಾಪು ಎಂಬಲ್ಲಿ ಸಂಭವಿಸಿದೆ.
ಗಾಯಗೊಂಡವರನ್ನು ಆಟೋ ಚಾಲಕ ರಾಧಾಕೃಷ್ಣ ಸಫಲ್ಯ, ಪ್ರಯಾಣಿಕರಾದ ಬಾಬು ನಾಯ್ಕ ಹಾಗೂ ಶ್ವೇತಾ ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.