ಏರ್ಪೋರ್ಟ್ ಗೆ ಮುತ್ತಿಗೆ ಹಾಕಲು ಯತ್ನ – ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 29. ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವ ಸುಪ್ರೀಂಕೋರ್ಟ್​ ಆದೇಶದ ಬೆನ್ನಲ್ಲೇ ರಾಜ್ಯದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದೆ. ಇದಕ್ಕೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಅದರಂತೆ ಇಂದು(ಸೆ.29) ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆ ಬೆಳಿಗ್ಗೆಯಿಂದಲೇ ಬಂದ್​ಗೆ ಉತ್ತಮ ಪ್ರತಿಕ್ರಿಯೆ ಕಂಡುಬಂದಿದೆ.

ಅದರಂತೆ ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಘೋಷಣೆ ಕೂಗುತ್ತಾ ಏರ್ಪೋರ್ಟ್ ಗೆ ಮುತ್ತಿಗೆ ಹಾಕಿದ ಕರವೇ ಕಾರ್ಯಕರ್ತರು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅರೈವಲ್ ಗೇಟ್ ಬಳಿ ಕನ್ನಡ ಬಾವುಟಗಳನ್ನು ಕೈಲಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಕರವೇ ಕಾರ್ಯಕರ್ತರನ್ನು ವಶಕ್ಕೆ ಪಡೆಯಲು ಪೊಲೀಸರು ಹರಸಾಹಸ ನಡೆಸಿದ್ದಾರೆ. ಇದೀಗ 20 ಕ್ಕೂ ಅಧಿಕ ಕರವೇ ಕಾರ್ಯಕರ್ತರನ್ನ ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.

Also Read  ಮಂಗಳೂರು: ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ➤ ದ್ವಿಚಕ್ರ ವಾಹನ ಸವಾರನಿಗೆ ಗಾಯ

error: Content is protected !!
Scroll to Top