ಎಸ್ಸೆಸ್ಸೆಲ್ಸಿ ಪರೀಕ್ಷೆಯ ತಯಾರಿ ಬಗ್ಗೆ ನೇರ ಫೋನ್ ಇನ್ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.09. ಮಾರ್ಚ್/ಏಪ್ರಿಲ್‍ನಲ್ಲಿ ನಡೆಯಲಿರುವ 2017-18ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯ ತಯಾರಿ ಬಗ್ಗೆ ಗಣಿತ ಮತ್ತು ವಿಜ್ಞಾನ ವಿಷಯಗಳಿಗೆ ಮಂಗಳೂರು ಟ್ಯೂಶನ್-ರಾಮನ್ ಪಬ್ಲಿಕೇಶನ್ ಇವರ ಪ್ರಯೋಜತ್ವದಲ್ಲಿ ಆಕಾಶವಾಣಿ, ಮಂಗಳೂರು ಇವರ ವತಿಯಿಂದ ನೇರ ಪೋನ್ ಇನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ‌.

ಫೆಬ್ರವರಿ 11 ರಂದು ಬೆಳಿಗ್ಗೆ 10.30 ರಿಂದ 11.30 ರವರೆಗೆ ವಿಜ್ಞಾನ ವಿಷಯದ ಬಗ್ಗೆ ಫೆಬ್ರವರಿ 18 ರಂದು ಬೆಳಿಗ್ಗೆ 10.30 ರಿಂದ 11.30 ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಸಂಬಂಧಿಸಿದಂತೆ ನಡೆಯಲಿರುವ ಈ ಪೋನ್ ಇನ್ ಕಾರ್ಯಕ್ರಮದ ಸದುಪಯೋಗವನ್ನು ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಪಡೆದುಕೊಳ್ಳುವಂತೆ ಉಪನಿರ್ದೇಶಕರು (ಆಡಳಿತ), ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಪ್ರಕಟಣೆ ತಿಳಿಸಿದೆ.

Also Read  ಕಡಬ: ಬೇರಿಕೆ ಕುರಿಯಾಳಕೊಪ್ಪ ಕಾಂಕ್ರೀಟಿಕರಣ ರಸ್ತೆ ಉದ್ಘಾಟನೆ

error: Content is protected !!
Scroll to Top