ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಗಾಂಧಿ ಜಯಂತಿ ಆಚರಣೆ- ಸ್ವಚ್ಛತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಅ. 02. ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ಅಕ್ಟೋಬರ್ 2ರಂದು ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ಮುಖ್ಯಶಿಕ್ಷಕರಾದ ಶ್ರೀಮತಿ ಶೈಲಶ್ರೀ ರೈ ಎಸ್ ದೀಪ ಪ್ರಜ್ವಲನ ಮಾಡಿ ಗಾಂಧೀಜಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಲಾಯಿತು.

ಗಾಂಧಿ ಜಯಂತಿಯ ಅಂಗವಾಗಿ ಮುಖ್ಯಸ್ಥರ ಹಾಗೂ ಶಿಕ್ಷಕರ ಕೊಠಡಿ, ತರಗತಿ ಕೊಠಡಿಗಳು, ಪ್ರಯೋಗಾಯ, ಗ್ರಂಥಾಲಯ, ಕಂಪ್ಯೂಟರ್ ಕೊಠಡಿ, ಸಭಾಭವನ, ಶೌಚಾಲಯ ಹಾಗೂ ಶಾಲಾ ಸುತ್ತಮುತ್ತಲಿನ ಸ್ಥಳಗಳನ್ನು ಸ್ವಚ್ಛ ಮಾಡುವುದರ ಮೂಲಕ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

Also Read  ಕಡಬ: ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವ ➤ ನಾಳೆ (ಡಿ. 07) ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಸನ್ಮಾನ

error: Content is protected !!
Scroll to Top