(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಅ. 02. ನಗರದ ರಾಗಿಗುಡ್ಡ ಎಂಬಲ್ಲಿ ಈದ್ ಮಿಲಾದ್ ಮೆರವಣಿಗೆಯ ಸಂದರ್ಭ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು, ಅಲ್ಲದೇ ಪೊಲೀಸರ ಮೇಲೂ ಕಲ್ಲು ಎಸೆದಿದ್ದರಿಂದ, ಅನಿವಾರ್ಯವಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಗಲಾಟೆಗೆ ಕಾರಣಕರ್ತರಾಗಿರುವ 43 ದುಷ್ಕರ್ಮಿಗಳನ್ನು ಬಂದಿಸಿದ್ದು ಅವರ ಮೇಲೆ ಮೊಕದ್ದಮೆಗಳನ್ನು ಹೂಡಲಾಗುತ್ತಿದೆ ಎಂದು ಶಿವಮೊಗ್ಗದ ಸಂಘರ್ಷದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯರವರು ತಿಳಿಸಿದ್ದಾರೆ.
ಈ ಸಂಬಂಧ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಅವರು, ‘ಯಾವುದೇ ಧಾರ್ಮಿಕ ಕಾರ್ಯಕ್ರಮಕ್ಕೆ ಧಕ್ಕೆ ತರುವುದು, ಕಲ್ಲು ತೂರುವುದು ಕಾನೂನು ಬಾಹಿರ. ಇಂಥ ಚಟುವಟಿಕೆಗನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ, ಇಂತಹ ಕೃತ್ಯಗಳನ್ನು ಖಂಡಿತಾ ಹತ್ತಿಕ್ಕುತ್ತೇವೆ. ಶಿವಮೊಗ್ಗ ನಗರ ಸಂಪೂರ್ಣ ನಿಯಂತ್ರಣದಲ್ಲಿದೆ. ಪೊಲೀಸರು ಕ್ಷಿಪ್ರ ಕ್ರಮ ಕೈಗೊಂಡಿದ್ದರಿಂದ ನಗರದಲ್ಲಿ ಶಾಂತಿ ನೆಲೆಸಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.