(ನ್ಯೂಸ್ ಕಡಬ) newskadaba.com ಕಡಬ, ಅ. 04. ಇಲ್ಲಿನ ಸರಸ್ವತೀ ಆಂಗ್ಲಮಾಧ್ಯಮ ಶಾಲೆಯಲ್ಲಿ ಅಕ್ಟೋಬರ್ 2ರಂದು ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ಮುಖ್ಯಶಿಕ್ಷಕರಾದ ಶ್ರೀಮತಿ ಭವ್ಯಶ್ರೀ ಕೆ ದೀಪ ಪ್ರಜ್ವಲನ ಮಾಡಿ ಗಾಂಧೀಜಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಲಾಯಿತು.
ಗಾಂಧಿ ಜಯಂತಿಯ ಅಂಗವಾಗಿ ಮುಖ್ಯಸ್ಥರ ಹಾಗೂ ಶಿಕ್ಷಕರ ಕೊಠಡಿ, ತರಗತಿ ಕೊಠಡಿಗಳು, ಗ್ರಂಥಾಲಯ, ಸಭಾಭವನ, ಶೌಚಾಲಯ ಹಾಗೂ ಶಾಲಾ ಸುತ್ತಮುತ್ತಲಿನ ಸ್ಥಳಗಳನ್ನು ಸ್ವಚ್ಛ ಮಾಡುವುದರ ಮೂಲಕ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.