ಸುಬ್ರಹ್ಮಣ್ಯ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ದಂಪತಿ ಕುಕ್ಕೆಶ್ರೀ ದೇವಳಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, . 09. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಮತ್ತು ಪತ್ನಿ ಚಿನ್ನಮ್ಮ ಅವರು ಇಂದು ಬೆಳ್ಳಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.

ಭಾನುವಾರದಂದು ರಾತ್ರಿ ಸುಬ್ರಹ್ಮಣ್ಯಕ್ಕೆ ಆಗಮಿಸಿರುವ ದೇವೇಗೌಡ ಕುಟುಂಬ ಸೋಮವಾರ ಬೆಳಗ್ಗೆ ಶ್ರೀ ದೇವರ ದರ್ಶನ ಪಡೆದು, ಕ್ಷೇತ್ರದಲ್ಲಿ ವಿವಿಧ ಸೇವೆಗಳನ್ನು ನೆರವೇರಿಸಲಿದ್ದಾರೆ. ಇನ್ನು ದೇವೇಗೌಡರು ಭಾನುವಾರ ಮಧ್ಯಾಹ್ನ ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ನಿರೀಕ್ಷೆ ಇತ್ತು. ಆದರೆ ಸಕಲೇಶಪುರ ಮತ್ತು ಕುಕ್ಕೆ ಸುಬ್ರಹ್ಮಣ್ಯ ಕಡೆಗಳಲ್ಲಿ ದಟ್ಟವಾದ ಮೋಡ ಕವಿದ ವಾತಾವರಣವಿದ್ದ ಹಿನ್ನೆಲೆ ರಾತ್ರಿ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ ಬಳಿಕ ರಸ್ತೆ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಅಲ್ಲಿ ವಾಸ್ತವ್ಯ ಹೂಡಿದ್ದಾರೆ.

error: Content is protected !!

Join the Group

Join WhatsApp Group