(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12. ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಮನೆ ಹಾಗೂ ಕಟ್ಟಡ ನಿರ್ಮಾಣಕ್ಕೆ ಇದ್ದ ನಿರ್ಬಂಧವನ್ನು ಸರ್ಕಾರ ಸಡಿಲಿಕೆ ಮಾಡಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಈ ಕುರಿತು ಸಂಪುಟ ಉಪಸಮಿತಿ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಈವರೆಗೆ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವಂತಹ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಮನೆ ಹಾಗೂ ಕಟ್ಟಡ ನಿರ್ಮಾಣಕ್ಕೆ ಅನುಮತಿ ಇರಲಿಲ್ಲ. ಈ ವ್ಯಾಪ್ತಿಯಲ್ಲಿರುವ ಖಾಸಗಿ ಭೂಮಿಯಲ್ಲಿ ಫಾರಂ ಹೌಸ್, ರೆಸಾರ್ಟ್, ಸಾ ಮಿಲ್ ಹಾಗೂ ಪವನ ವಿದ್ಯುತ್ ಘಟಕಗಳನ್ನು ನಿರ್ಮಾಣ ಮಾಡಬಹುದು. ಅದಕ್ಕೆ ಅನುಮತಿ ದೊರೆಯಲಿದೆ ಎಂದಿದ್ದಾರೆ. ರಾಜ್ಯದಲ್ಲಿ ಸುಮಾರು 35 ಪ್ರದೇಶಗಳನ್ನು ಗುರುತಿಸಲಾಗಿದ್ದು, ಈ ಪೈಕಿ 29 ಪ್ರದೇಶಗಳಲ್ಲಿ ಇಂತಹ ಚಟುವಟಿಕೆಗಳಿಗೆ ಅನುಮತಿ ನೀಡಲು ಸಹಮತ ವ್ಯಕ್ತವಾಗಿತ್ತು. ನಾಗರಹೊಳೆ ಸೇರಿ ಇನ್ನೂ 6 ಪ್ರದೇಶಗಳಲ್ಲಿ ಈ ನಿಯಮವನ್ನು ಸಡಿಲಿಸುವ ಕುರಿತು ಸಹಮತ ವ್ಯಕ್ತವಾಗಿದೆ ಎಂದು ಅವರು ತಿಳಿಸಿದರು.