ಉಪ್ಪಿನಂಗಡಿ: ಸಿಡಿಲು ಬಡಿದು ಮನೆಗೆ ಹಾನಿ- ಅಪಾರ ನಷ್ಟ



(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 14. ಸಿಡಿಲು ಬಡಿದ ಪರಿಣಾಮ ಮನೆಯೊಂದು ಬಾಗಶ. ಬಿರುಕು ಬಿಟ್ಟಿದ್ದು ಮನೆ ಸಂಪೂರ್ಣವಾಗಿ ಹಾನಿಯಾದ ಘಟನೆ ಉಪ್ಪಿನಂಗಡಿ ಸಮೀಪದ ತೆಕ್ಕಾರು ಎಂಬಲ್ಲಿ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.







ಇಲ್ಲಿನ ತೆಕ್ಕಾರು ಕಾಪಿಗುಡ್ಡೆ ನಿವಾಸಿ ತಾಹಿರ ಎಂಬವರ ಮನೆಗೆ ಸಿಡಿಲು ಬಡಿದು ಸುಮಾರು 2ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಇನ್ನು ಸಿಡಿಲಿನ ರಭಸಕ್ಕೆ ಮನೆಯ ಗೋಡೆಗಳು ಬಿರುಕು ಬಿಟ್ಟಿದ್ದು ಮನೆಯ ವಯರಿಂಗ್ ಗಳು ಸಂಪೂರ್ಣ ಹಾನಿಯಾಗಿದೆ. ಮನೆಯ ಪ್ರತಿ ಗೋಡೆಗಳು ಬಿರುಕು ಬಿಟ್ಟಿದ್ದರಿಂದ ಯಾವಾಗ ಬೇಕಾದರೂ ಮನೆ ಬೀಳುವ ಸಾಧ್ಯತೆ ಹೆಚ್ಚಿದೆ.






ಸ್ಥಳಕ್ಕೆ ಗ್ರಾಮ ಆಡಳಿತಾಧಿಕಾರಿ ಸಾಕಮ್ಮ ಕೆ. ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡರು.
ಇದೇ ವೇಳೆ ಕುಟುಂಬಸ್ಥರು ವಿಎ ಸಮ್ಮುಖದಲ್ಲಿ ತಹಶೀಲ್ದಾರರಿಗೆ ಸೂಕ್ತ ಪರಿಹಾರ ಕೋರಿ ಮನವಿ ಸಲ್ಲಿಸಿದರು. ತೆಕ್ಕಾರು ಪಂಚಾಯತ್ ಮಾಜಿ ಅಧ್ಯಕ್ಷ ಅಬ್ದುಲ್ ರಜಾಕ್, ಪಂಚಾಯತ್ ಮಾಜಿ ಸದಸ್ಯ N.H.ಅಬ್ದುಲ್ ರಹಿಮಾನ್, ಪಂಚಾಯತ್ ಸದಸ್ಯ ಅನ್ವರ್ ನಿಯೋಗದಲ್ಲಿದ್ದರು.

error: Content is protected !!
Scroll to Top